ತಿರುಪತಿ: 'ಜಗತ್‌ಪ್ರಸಿದ್ಧ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಟ್ಟು ಕಾಣಿಕೆ ಮೊತ್ತ ₹102 ಕೋಟಿ ಸಂಗ್ರಹವಾಗಿದೆ' ಎಂದು ತಿರುಮಲ ತಿರುಪತಿ ದೇವಸ್ಥಾನಮ್ಸ್ (TTD)ನ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ.ಧರ್ಮರೆಡ್ಡಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಏಪ್ರಿಲ್ ತಿಂಗಳಿನಲ್ಲಿ ಒಟ್ಟು 20 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.