ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಹಾಗೂ ಸಹ ಆರೋಪಿ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.