ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ನೌಕರರನ್ನು ಕೂಡಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.
ದೆಹಲಿ ಮಹಿಳಾ ಆಯೋಗದ ಅಂದಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ನಿಯಮಗಳಿಗೆ ವಿರುದ್ಧವಾಗಿ ಹೆಚ್ಚುವರಿ ನೌಕರರನ್ನು ನೇಮಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.
ಮಹಿಳಾ ಆಯೋಗಕ್ಕೆ 40 ಜನರನ್ನು ಮಾತ್ರ ನೇಮಿಸಿಕೊಳ್ಳಲು ಅಧಿಕಾರವಿದೆ. ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ಇಲ್ಲದೆ 223 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುವ ಅಧಿಕಾರ ಆಯೋಗಕ್ಕೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.