ನವದೆಹಲಿ: ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ 27 ವಾರಗಳ ಗರ್ಭಿಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಳ್ಳಿಹಾಕಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಕೋರ್ಟ್ ಈ ವೇಳೆ ಅಭಿಪ್ರಾಯಪಟ್ಟಿದೆ.
ನವದೆಹಲಿ: ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿ ಕೋರಿ 27 ವಾರಗಳ ಗರ್ಭಿಣಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಳ್ಳಿಹಾಕಿದೆ. ಗರ್ಭದಲ್ಲಿರುವ ಭ್ರೂಣಕ್ಕೂ ಬದುಕುವ ಮೂಲಭೂತ ಹಕ್ಕು ಇದೆ ಎಂದು ಕೋರ್ಟ್ ಈ ವೇಳೆ ಅಭಿಪ್ರಾಯಪಟ್ಟಿದೆ.
ಗರ್ಭಪಾತಕ್ಕೆ ಅನುಮತಿ ಕೋರಿ 20 ವರ್ಷ ವಯಸ್ಸಿನ ಅವಿವಾಹಿತ ಯುವತಿಯು ಮೊದಲಿಗೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ವೇಳೆ, ವೈದ್ಯಕೀಯ ಗರ್ಭಪಾತ ಕಾಯ್ದೆಯು (ಎಂಟಿಪಿ) ತಾಯಿಯ ಹಕ್ಕಿನ ಕುರಿತಾಗಿದೆ ಎಂದು ಯುವತಿಯ ಪರ ವಕೀಲರು ಪೀಠದೆದುರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, 'ಗರ್ಭ ಏಳು ವಾರವನ್ನೂ ಮೀರಿದೆ. ಭ್ರೂಣಕ್ಕೂ ಬದುಕುವ ಹಕ್ಕಿದೆ' ಎಂದಿತು.
ಇದಕ್ಕೆ, 'ಭ್ರೂಣವು ತಾಯಿಯ ಗರ್ಭದಲ್ಲಿದೆ. ಪ್ರಸವದವರೆಗೂ ಅದು ತಾಯಿಯ ಹಕ್ಕು. ಯುವತಿಯು ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದು, ಆಕೆ ಈಗ ಮಾನಸಿಕವಾಗಿ ಕುಗ್ಗಿಹೋಗಿದ್ದಾಳೆ. ಆಕೆಗೆ ಸಮಾಜವನ್ನು ಎದುರಿಸಲು ಆಗುತ್ತಿಲ್ಲ. ಆಕೆಯ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಪರಿಗಣಿಸಬೇಕು' ಎಂದು ವಕೀಲರು ವಾದಿಸಿದರು. ವಕೀಲರ ವಾದವನ್ನು ನ್ಯಾಯಪೀಠ ಪುರಸ್ಕರಿಸಲಿಲ್ಲ.