ರಾಜ್‌ಕೋಟ್: ರಾಜ್‌ಕೋಟ್ ಮನರಂಜನಾ ಕೇಂದ್ರ 'ಜಿಆರ್‌ಪಿ ಗೇಮ್ ಝೋನ್'ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.
ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ದುರಂತ: ಮೃತರ ಸಂಖ್ಯೆ 27ಕ್ಕೆ ಏರಿಕೆ -ಮಾಲೀಕ ಬಂಧನ
0
ಮೇ 26, 2024
Tags
ರಾಜ್‌ಕೋಟ್: ರಾಜ್‌ಕೋಟ್ ಮನರಂಜನಾ ಕೇಂದ್ರ 'ಜಿಆರ್‌ಪಿ ಗೇಮ್ ಝೋನ್'ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.
ಮೃತರಲ್ಲಿ 12 ವರ್ಷದ ನಾಲ್ವರು ಮಕ್ಕಳೂ ಸೇರಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ದುರಂತದ ತೀವ್ರತೆ ಸಾವು ನೋವಿನ ಪ್ರಮಾಣವನ್ನು ಹೆಚ್ಚಿಸಬಹುದು ಎಂದು ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಗೇಮ್ ಜೋನ್ ನ ಮಾಲೀಕರನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಸರ್ಕಾರ ಈ ಘಟನೆಯ ತನಿಖೆಯ ಹೊಣೆಯನ್ನು ಎಸ್.ಐ.ಟಿಗೆ ವಹಿಸಿ ಆದೇಶಿಸಿದೆ.
ಆಟದ ಚಟುವಟಿಕೆಗಳಿಗೆ ನಿರ್ಮಿಸಲಾಗಿದ್ದ ಫೈಬರ್ ಗೊಮ್ಮಟದಲ್ಲಿ ಸಂಜೆ ಸುಮಾರು 4:30 ಗಂಟೆಗೆ ಬೆಂಕಿ ಹೊತ್ತಿಕೊಂಡಿತು. ಬೆಂಕಿ ಕಾರಣಕ್ಕೆ ಕಟ್ಟಡ ಕುಸಿಯಿತು. ಈ ವೇಳೆ ಮಕ್ಕಳು ಸೇರಿ ಹಲವರು ಆ ಸ್ಥಳದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ಬೆಳಿಗ್ಗೆ 4:30ರವರೆಗೆ ನಡೆದಿದ್ದವು. ಬೇಸಿಗೆ ರಜೆ ಕಾರಣ ಗೇಮ್ ಝೋನ್‌ನಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ' ಎಂದು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ತನಿಖೆ ನಡೆಸಲಾಗುವುದು. ನಗರದಲ್ಲಿರುವ ಎಲ್ಲಾ ಗೇಮ್ ಝೋನ್‌ಗಳಿಗೆ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.