ತಿರುವನಂತಪುರ: ಕೇರಳದಾದ್ಯಂತ ಉತ್ತಮ ಮಳೆಯಾಗುತ್ತಿರುವ ನಡುವೆಯೇ, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೇರಳದ 2 ಜಿಲ್ಲೆಗಳಿಗೆ ಮಂಗಳವಾರ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ.
ತಿರುವನಂತಪುರ: ಕೇರಳದಾದ್ಯಂತ ಉತ್ತಮ ಮಳೆಯಾಗುತ್ತಿರುವ ನಡುವೆಯೇ, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೇರಳದ 2 ಜಿಲ್ಲೆಗಳಿಗೆ ಮಂಗಳವಾರ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ.
ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ 6 ಸೆಂ.ಮೀನಿಂದ 11 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಇದರ ನಡುವೆಯೇ, ಅರಬ್ಬಿ ಸಮುದ್ರದಲ್ಲಿ ಭಾರಿ ಎತ್ತರದ ಅಲೆಗಳು ಏಳಲಿರುವ ಕಾರಣ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು(ಕೆಎಸ್‌ಡಿಎಂಎ) ಮೀನುಗಾರರು, ಸಮುದ್ರ ತೀರದ ನಿವಾಸಿಗಳು ಹಾಗೂ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.