HEALTH TIPS

ಅಫ್ಗಾನಿಸ್ತಾನದಲ್ಲಿ ಭಾರಿ ಮಳೆ; 300ಕ್ಕೂ ಹೆಚ್ಚು ಸಾವು

             ಕಾಬೂಲ್‌: ಅಫ್ಗಾನಿಸ್ತಾನದಲ್ಲಿ ಸುರಿದ ಭಾರಿ ಮಳೆ ಹಾಗೂ ನಂತರ ಉಂಟಾದ ದಿಢೀರ್‌ ಪ್ರವಾಹದಿಂದಾಗಿ ಸಂಭವಿಸಿದ ಅವಘಡಗಳಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ ಹೇಳಿದೆ.

             ಆದರೆ, ಮೃತಪಟ್ಟವರ ಸಂಖ್ಯೆ ಕುರಿತು ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡಿಲ್ಲ.


              'ಭೀಕರ ಪ್ರವಾಹದಿಂದಾಗಿ ನೂರಾರು ಜನರು ಮೃತಪಟ್ಟಿದ್ಧಾರೆ. ಭಾರಿ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ' ಎಂದು ತಾಲಿಬಾನ್‌ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್‌ ಅವರು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

         'ಬಡಖ್ಷಾನ್, ಬಘ್ಲಾನ್‌, ಘೋರ್‌ ಹಾಗೂ ಹೇರಾತ್‌ ಪ್ರಾಂತ್ಯಗಳಲ್ಲಿ ಹಾನಿ ಸಂಭವಿಸಿದೆ. ಈ ಪ್ರಾಕೃತಿಕ ವಿಕೋಪದಿಂದಾಗಿ ಆರ್ಥಿಕವಾಗಿಯೂ ಅಪಾರ ನಷ್ಟ ಉಂಟಾಗಿದೆ' ಎಂದು ಜಬೀವುಲ್ಲಾ ಹೇಳಿದ್ದಾರೆ.

            ದೇಶದ ಉತ್ತರ ಭಾಗದಲ್ಲಿನ ಬಘ್ಲಾನ್‌ ಪ್ರಾಂತ್ಯದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಶುಕ್ರವಾರ ಉಂಟಾದ ಪ್ರವಾದಿಂದಾಗಿ ಕನಿಷ್ಠ 50 ಮಂದಿ ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಆಸ್ತಿಗಳಿಗೆ ಹಾನಿಯಾಗಿದೆ. ತಖಾರ್‌ ಪ್ರಾಂತ್ಯದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

               'ಬಘ್ಲಾನ್‌ ಪ್ರಾಂತ್ಯದಲ್ಲಿ ಪ್ರವಾಹಕ್ಕೆ ಸಿಲುಕಿರುವವರ ರಕ್ಷಣಾ ಕಾರ್ಯದಲ್ಲಿ ವಾಯುಪಡೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು, ಸಾಕಷ್ಟು ಸಂಖ್ಯೆಯ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ' ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries