ಕಾಸರಗೋಡು : ಜಿಲ್ಲೆಯ ಎಲ್ಲಾ ಜನತೆಗೆ ಕುಡಿಯುವ ನೀರು ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಸೂಚನೆ ನೀಡಿದ್ದಾರೆ. ಪ್ರಸಕ್ತ ಜಿಲ್ಲೆಯಲ್ಲಿ ಕೂಡಿನೀರಿನ ಬಗ್ಗೆ ಆತಂಕ ಪಡಬೇಕಾಗಿಲ್ಲ. ಬಾವಿಕ್ಕರೆ ಕುಡಿಯುವ ನೀರಿನ ಯೋಜನೆಯಲ್ಲಿ ಮೇ 31ರ ವರೆಗೂ ವಿತರಣೆಗೆ ಅಗತ್ಯವಾದ ಕುಡಿಯುವ ನೀರು ಲಭ್ಯವಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಪ್ರಾದೇಶಿಕ ಮೂಲಗಳನ್ನು ಬಳಸಿಕೊಂಡು ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಯೋಜನೆಗಳು, 'ಜಲನಿಧಿ ಯೋಜನೆಯ ಕೊಳವೆ ಬಾವಿಗಳು ಮತ್ತು ಸಾರ್ವಜನಿಕ ಬಾವಿಗಳನ್ನು ಸಾಧ್ಯವಾದಷ್ಟು ಬಳಸಿಕೊಂಡು ನೀರು ಪೂರೈಸಬೇಕು.
ಯಾವುದಾದರೂ ಪಂಚಾಯಿತಿಯಲ್ಲಿ ಪೂರೈಕೆಗೆ ಅಗತ್ಯವಾದ ಕುಡಿಯುವ ನೀರು ಲಭ್ಯವಿಲ್ಲದಿದ್ದಲ್ಲಿ ಬಾವಿಕ್ಕರೆ ಕುಡಿಯುವ ನೀರು ಯೋಜನೆಯಿಂದ ನೀರನ್ನು ಬಳಸಿಕೊಳ್ಳಬಹುದು. ಕಾಲನಿ ಹಾಗೂ ಇತರ ದೂರ ಪ್ರದೆಸಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವವರು ತಕ್ಷಣ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆಯ ಅಪಾಯ ವಿಶ್ಲೇಷಕಿ ಅಶ್ವತಿ ಕೃಷ್ಣ ಅವರನ್ನು ಸಂಯೋಜಕಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ (04994257700, 9446601700)
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ, ಗ್ರಾಮ ಪಂಚಾಯಿತಿ, ನಗರಸಭೆಯ ಕಾರ್ಯದರ್ಶಿಗಳು ಹಾಗೂ ಇತರ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಾತನಾಡಿದರು.
ಎಲ್ಲಾ ಪ್ರದೇಶಗಳಿಗೂ ಕುಡಿಯುವ ನೀರು ಲಭ್ಯವಗುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡದ ಕಾಲನಿಗಳು ಹಾಗೂ ಇತರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಮೇ 6ರ ನಂತರ ಮಳೆ ಆರಂಭವಾಗುವ ಸಾಧ್ಯತೆ ಬಗ್ಗೆ ಹವಾಮಾನ ತಜ್ಞರು ಮಾಹಿತಿ ನೀಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾg
ಎಡಿಎಂ ಕೆ.ವಿ.ಶ್ರುತಿ, ಸಣ್ಣ ನೀರಾವರಿ ಕಾರ್ಯಪಾಲಕ ಎಂಜಿನಿಯರ್ ಟಿ.ಸಂಜೀವ್, ನವ ಕೇರಳ ಯೋಜನೆಯ ಜಿಲ್ಲಾ ಸಂಯೋಜಕ ಕೆ. ಬಾಲಕೃಷ್ಣನ್, ಶುಚಿತ್ವ ಮಿಷನ್ ಜಿಲ್ಲಾ ಸಂಯೋಜಕಿ ಎ. ಲಕ್ಷ್ಮಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಪಾಯ ವಿಶ್ಲೇಷಕಿ ಅಶ್ವತಿ ಕೃಷ್ಣ, ಕೇರಳ ಜಲ ಪ್ರಾಧಿಕಾರದ ಪ್ರತಿನಿಧಿಗಳು, ಕೆಎಸ್‍ಇಬಿ, ಎಲ್‍ಎಸ್‍ಜಿಡಿ, ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.