ಕಾಸರಗೋಡು: ಜಿಲ್ಲೆಯ 40ನೇ ವರ್ಷಾಚರಣೆಯ ಅಂಗವಾಗಿ ಮೇ 24 ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಜಿಲ್ಲಾ ಮಟ್ಟದ ಉದ್ಘಾಟನೆ ನೆರವೇರಿಸುವರು.
ಜಿಲ್ಲಾಡಳಿತ, ಜಿಲ್ಲಾ ಮಾಹಿತಿ ಕಛೇರಿ, ಸಾಮಾಜಿಕ ಅರಣ್ಯ ಇಲಾಖೆ ನೇತೃತ್ವ ಹಾಗೂ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೇ 24 ರಂದು ಮಧ್ಯಾಹ್ನ 1.15ಕ್ಕೆ ಜಿಲ್ಲಾ ಮಾಹಿತಿ ಕಛೇರಿ ಹಾಗೂ ಅಕ್ಷರ ಗ್ರಂಥಾಲಯದ ನೇತೃತ್ವದಲ್ಲಿ ಜಿಲ್ಲೆಯ ಸರ್ಕಾರಿ ನೌಕರರಿಗೆ ಕಾಸರಗೋಡ್ @40 ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 255 145)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.