ಟೆಹ್ರಾನ್: ಇರಾನ್ ವಶದಲ್ಲಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿದೆ.
ಟೆಹ್ರಾನ್: ಇರಾನ್ ವಶದಲ್ಲಿದ್ದ ಸರಕು ಸಾಗಣೆ ಹಡಗಿನಲ್ಲಿದ್ದ 16 ಭಾರತೀಯರ ಪೈಕಿ ಐವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕಟಿಸಿದೆ.
ಹಡಗಿನಲ್ಲಿದ್ದ ಭಾರತೀಯರ ಪೈಕಿ ಏಕೈಕ ಮಹಿಳೆ ಅಯನ್ ಟೆಸ್ಸಾ ಜೋಸೆಫ್ ಅವರನ್ನು ಏಪ್ರಿಲ್ 18ರಂದು ಬಿಡುಗಡೆ ಮಾಡಲಾಗಿತ್ತು. ಟೆಹ್ರಾನ್‌ನಲ್ಲಿರುವ ಭಾರತೀಯ ಆಯೋಗ ಮತ್ತು ಇರಾನ್ ಸರ್ಕಾರದ ನಡುವಣ ನಿರಂತರ ಮಾತುಕತೆಗಳಿಂದಾಗಿ ಜೋಸೆಫ್ ಬಿಡುಗಡೆ ಸಾಧ್ಯವಾಗಿತ್ತು.
ಸದ್ಯ ಐವರ ಬಿಡುಗಡೆ ಸೇರಿದಂತೆ ಒಟ್ಟು 6 ಮಂದಿ ಇರಾನ್ ವಶದಿಂದ ಹೊರಬಂದಿದ್ದಾರೆ. ಇನ್ನೂ 11 ಮಂದಿಯ ಬಿಡುಗಡೆಗೆ ಪ್ರಯತ್ನ ಮುಂದುವರಿದಿದೆ.
ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ಆ ದೇಶದ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಇತ್ತೀಚೆಗೆ ಹೇಳಿದ್ದರು.
ಹಡಗಿನಲ್ಲಿರುವ ಸಿಬ್ಬಂದಿಯ ಯೋಗಕ್ಷೇಮ ಮತ್ತು ಹಡಗನ್ನು ಮರಳಿ ಪಡೆಯುವ ಕುರಿತಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಎಂಎನ್‌ಸಿಯೂ (ಮೆಡಿಟರೇನಿಯನ್ ಶಿಪ್ಪಿಂಗ್ ಕಂಪನಿ) ತಿಳಿಸಿತ್ತು.