ಜೈಪುರ: ರಾಜಸ್ಥಾನದ ಬಲೋತ್ರ ಜಿಲ್ಲೆಯಲ್ಲಿ ಬಿಸಿಲಿನ ಝಳಕ್ಕೆ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದು, ರಾಜ್ಯದ ಹಲವೆಡೆ 47 ರಿಂದ 48 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಜೈಪುರ: ರಾಜಸ್ಥಾನದ ಬಲೋತ್ರ ಜಿಲ್ಲೆಯಲ್ಲಿ ಬಿಸಿಲಿನ ಝಳಕ್ಕೆ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದು, ರಾಜ್ಯದ ಹಲವೆಡೆ 47 ರಿಂದ 48 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಮೇ 25 ಮತ್ತು 26ರಂದು ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, 'ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದು, 49 ರಿಂದ 50 ಡಿಗ್ರಿಯಷ್ಟು ತಾಪಮಾನ ದಾಖಲಾಗಬಹುದು' ಎಂದು ಎಚ್ಚರಿಸಿದೆ.
ಬಲೋತ್ರದಲ್ಲಿ ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿದ್ದು, ಶಿಂಧರ್ ಸಿಂಗ್ (41) ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕ ಸುರೇಶ್ ಯಾದವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ಅತ್ಯಂತ ಹೆಚ್ಚು ಉಷ್ಣತೆ ಹೊಂದಿರುವ ಬಾರ್ಮೆರ್ ಜಿಲ್ಲೆಯಲ್ಲಿ 48 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಜೈಪುರದಲ್ಲಿ ಬುಧವಾರ 45.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಬಿಸಿಲಿನ ತಾಪಕ್ಕೆ ಜನರು ಮನೆಯಿಂದ ಹೊರಗಡೆ ಬರುತ್ತಿಲ್ಲ. ರಸ್ತೆಗಳಲ್ಲಿ ಸಿಗ್ನಲ್ ಇರುವ ಸ್ಥಳಗಳಲ್ಲಿ ವಾಹನ ಸವಾರರಿಗೆ ಬಿಸಿಲು ಸೋಕದಂತೆ ಜಿಲ್ಲಾಡಳಿತವು ಹಸಿರು ಪರದೆಯನ್ನು ಅಳವಡಿಸಿದೆ.