ಅಮೆರಿಕ: ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ಕಳೆದ ಮಾರ್ಚ್ನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಶನಿವಾರ ಹೇಳಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಇವರು ಅಮೆರಿಕದ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯಲ್ಲಿ ನಾಲ್ಕು ಗಂಟೆಗಳ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎರಡು ತಿಂಗಳ ಹಿಂದೆ ಅವರಿಗೆ ಹಂದಿ ಕಿಡ್ನಿ ಕಸಿ ಮಾಡಲಾಗಿತ್ತು. ಅವರ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅವರು ಕಿಡ್ನಿ ಕಸಿಗೆ ಸಂಬಂಧಿಸಿ ಅವರು ಮೃತಪಟ್ಟಿಲ್ಲ ಎಂದು ಆಸ್ಪತ್ರೆ ದೃಢಪಡಿಸಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.
62 ವರ್ಷದ ರಿಚರ್ಡ್ ಸ್ಲಾಯ್ಮನ್ ಅವರು ಅಮೆರಿಕದ ಮ್ಯಾಸಚೂಸೆಟ್ಸ್‌ನ ವೇಮೌತ್‌ನ ನಿವಾಸಿಯಾಗಿದ್ದು, ಇವರು ಕಿಡ್ನಿ ಕಸಿ ಚಿಕಿತ್ಸೆಗೆ ಒಳಗಾಗುವುದಕ್ಕೂ ಮೊದಲು ಟೈಪ್ 2 ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದರು.
ಅಧಿಕ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದ ಇವರು ಹಲವು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪರಿಣಾಮ 2018ರಲ್ಲಿ ಮಾನವ ಕಿಡ್ನಿ ಕಸಿಗೂ ಒಳಗಾಗಿದ್ದರು. ಅದು ಸುಮಾರು ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಿತ್ತು. 2023ರಲ್ಲಿ ಮತ್ತೆ ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಹಂದಿ ಕಿಡ್ನಿ ಕಸಿ ಮಾಡಲಾಗಿತ್ತು.