ನವದೆಹಲಿ: ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಮ್‌ಯು) ಆವರಣದಲ್ಲಿ ಕಳೆದ ವರ್ಷ ಬೀದಿ ನಾಯಿಗಳ ದಾಳಿಯಿಂದ 65 ವರ್ಷದ ವೃದ್ಧ ಮೃತಪಟ್ಟಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅಯೋಗ, ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ₹7.5 ಲಕ್ಷ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು ಎಂಟು ವಾರಗಳ ಒಳಗಾಗಿ ಹಣ ಪಾವತಿ ಮಾಡಿರುವ ದಾಖಲೆಗಳನ್ನು ಒದಗಿಸುವಂತೆ ಸೂಚಿಸಿರುವುದಾಗಿ ತಿಳಿಸಿದೆ.