ಬೆಂಗಳೂರು: ಈ ಬಾರಿಯ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಈ ಬಾರಿಯ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ ತಿಳಿಸಿದರು.
ಈ ಬಾರಿ ಮೂರು ಬಾರಿ ಎಕ್ಸಾಂ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಅಂತಿಮವಾಗಿ ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಅಂತ ಹೇಳಿದರು.
ಈ ಬಾರಿ ಉಡುಪಿ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನವನ್ನು ಶೇಕಡ 94 ರೊಂದಿಗೆ ಪಡೆದುಕೊಂಡಿದೆ. ದ. ಕನ್ನಡ ಜಿಲ್ಲೆಗೆ ದ್ವೀತಿಯ ಸ್ಥಾನವನ್ನು ಪಡೆದುಕೊಂಡಿದೆ. ಅದು ಶೇ 92.12 ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಗೆ ಕೊನೆ ಸ್ಥಾನ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾದ್ದಾರೆ. ಓರ್ವ ವಿದ್ಯಾರ್ಥಿನಿ ಮಾತ್ರ ಈ ಬಾರಿ 625ಕ್ಕೆ 625 ಅಂಕಗಳನ್ನು ತೆಗೆದುಕೊಂಡಿದ್ದಾರೆ ಅಂತ ತಿಳಿಸಿದಿರು. ಬಾಗಲಕೋಟೆಯ ಅಂಕಿತ ಬಸಪ್ಪ (625ಕ್ಕೆ 625) ಅವರು ಪಡೆದುಕೊಂಡಿದ್ದಾರೆ. ಹರ್ಶಿತ ಡಿಎಂ ಮಧುಗಿರಿಯವರು 624/625 ಅಂಕಗಳನ್ನು ಪಡೆದುಕೊಂಢಿದ್ದಾರೆ. ಇನ್ನೂ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ, ಈ ಬಾರಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ ಅಂಥ ತಿಳಿಸಿದರು.
ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್‌ಸೈಟ್ ಅನ್ನು ಭೇಟಿ ನೀಡಬಹುದಾಗಿದೆ
https://kseab.karnataka.gov.in
https://karresults.nic.in
https://sslc.karnataka.gov.in