ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸುಮಾರು 1.40ಕ್ಕೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದು 48 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ ಸುಮಾರು 1.40ಕ್ಕೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದು 48 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ದೊಂಬಿವಿಲ್ ಪ್ರದೇಶದಲ್ಲಿಯ ಅಮುದಾನ್ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ರಾಜ್ಯದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, 'ದುರಂತದಲ್ಲಿ ಗಾಯಗೊಂಡಿರುವವರಿಗೆ ಎಐಎಂಎಸ್, ನೆಪ್ಚೂನ್ ಮತ್ತು ಗ್ಲೋಬಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಜೊತೆ ಪೊಲೀಸರು, ಸ್ಥಳೀಯ ಅಧಿಕಾರಿಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಆ ಪ್ರದೇಶದ ಕೆಲ ಮನೆಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟ ಸಂಭವಿಸಿದ ಕೈಗಾರಿಕಾ ಘಟಕವು ಕೆಲವು ತಿಂಗಳ ಹಿಂದೆ ಕಾರ್ಯನಿರ್ವಹಿಸುತ್ತಿರಲಿಲ್ಲ. ಈಚೆಗೆ ಅದನ್ನು ಪುನರಾರಂಭಿಸಲಾಗಿತ್ತು ಎಂದು ಸಾಮಂತ್ ಅವರು ತಿಳಿಸಿದರು. ಸ್ಥಳೀಯ ಶಾಸಕ ಶ್ರೀಕಾಂತ್ ಶಿಂದೆ ಮತ್ತು ಶಾಸಕ ರಾಜು ಪಾಟೀಲ್ ಅವರು ಎಂಐಡಿಸಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.