ಕಾಸರಗೋಡು: ಕರ್ನಾಟಕ ಸಂಘ ಅಂಧೇರಿ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹೊರನಾಡ ಕನ್ನಡ ಸಂಸ್ಕøತಿ ಸಂಭ್ರಮ ಕಾರ್ಯಕ್ರಮ ಜೂ. 9ರಂದು ಮುಂಬೈ ಕುರ್ಲಾ ಬಂಟರ ಭವನದ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರುಗಲಿದೆ.
ಬೆಳಗ್ಗೆ 9.30ಕ್ಕೆ ಸಂಘದ ಸದಸ್ಯರಿಂದ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಚಿಂತಕ ಕೆ.ಇ ರಾಧಾಕೃಷ್ಣ ದೀಪ ಪ್ರಜ್ವಲಿಸುವರು. ಅಂಧೇರಿ ಕರ್ನಾಟಕ ಸಂಘ ಅಧ್ಯಕ್ಷ ಭಾಸ್ಕರ ಸುವರ್ಣ ಸಸಿಹಿತ್ಲು ಅಧ್ಯಕ್ಷತೆ ವಹಿಸುವರು. ಕಾಸರಗೋಡಿನ ನಿವೃತ್ತ ಉಪ ಜಿಲ್ಲಾಧಿಕಾರಿ ಕೆ. ಶಶಿಧರ ಶೆಟ್ಟಿ, ಕಾಸರಗೊಡು ಜಿಲ್ಲಾ ಕನ್ನಡಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಪತ್ರಕರ್ತ, ಯಕ್ಷಗಾನ ಕಲಾವಿದ ವೇಣು ಗೋಪಾಲ್ ಶೇಣಿ, ಪೈವಳಿಕೆ ಗ್ರಾಪಂ ಸ್ಥಾಯೀ ಸಮಿತಿ ಅಧ್ಯಕ್ಷ ಜೆಡ್.ಎ ಕಯ್ಯಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನಂತರ ಸಮೂಹಗಾನ ಸ್ಪರ್ಧೆ, ಜಾನಪದ ನೃತ್ಯ, ಮಧ್ಯಾಹ್ನ ಹಾಸ್ಯ ಕವಿಗೋಷ್ಠಿ ನಡೆಯುವುದು.
ಸಂಜೆ 5ಕ್ಕೆ ನಡೆಯುವ ಸಮರೋಪ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ವಿಧಾನಸಭಾ ಅಧ್ಯಕ್ಷ ಯು. ಟಿ. ಖಾದರ್ ಸಮಾರಂಭ ಉದ್ಘಾಟಿಸುವರು. ಹಿರಿಯ ಉದ್ಯಮಿ, ಕೊಡುಗೈ ದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಣ್ಣ ನೀರಾವರಿ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್ ಭೋಸರಾಜ್ ಪ್ರಶಸ್ತಿ ಪ್ರದಾನ ನಡೆಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಹಿರಿಯ ಸಾಹಿತಿ ಪ್ರೊ. ಎಸ್.ಜಿ ಸಿದ್ಧಲಿಂಗಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರದೀಪ್‍ಕುಮಾರ್ ಕಲ್ಕೂರ ಮೊದಲಾದವರು ಪಾಲ್ಗೊಳ್ಳುವರು. ಈ ಸಂದರ್ಭ ವಿವಿಧ ವಲಯಗಳಲ್ಲಿ ಸಾಧನೆ ತೋರಿದ ಮಹನೀಯರನ್ನು ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.