ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ ಡೋಂಬಿವಿಲ್ ಪ್ರದೇಶದಲ್ಲಿಯ ಅಮುದಾನ್ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಈ ದುರಂತ ಸಂಭವಿಸಿತ್ತು.
ಅಲ್ಲದೆ ಅಮುದಾನ್ ಕೆಮಿಕಲ್ಸ್ ಕಾರ್ಖಾನೆಯ ಮಾಲೀಕನ ವಿರುದ್ಧ ಪೊಲೀಸರು 'ಶಿಕ್ಷಾರ್ಹ ನರಹತ್ಯೆ' ಪ್ರಕರಣ ದಾಖಲಿಸಿದ್ದಾರೆ.
ಬಾಯ್ಲರ್ ಸ್ಫೋಟದಲ್ಲಿ 64 ಮಂದಿ ಗಾಯಗೊಂಡಿದ್ದರು. ಪಕ್ಕದ ಕಾರ್ಖಾನೆ ಹಾಗೂ ಮನೆಗಳಿಗೂ ಬೆಂಕಿ ಆವರಿಸಿತ್ತು. ಆ ಪ್ರದೇಶದ ಕೆಲ ಮನೆಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತಕ್ಕೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ, 'ಮತ್ತಷ್ಟು ಜನರು ಸಿಲುಕಿರುವ ಆತಂಕವಿದೆ. ಜನರನ್ನು ರಕ್ಷಿಸುವುದಕ್ಕೆ ಮೊದಲ ಆದ್ಯತೆಯಾಗಿದೆ' ಎಂದು ಹೇಳಿದ್ದಾರೆ.
ಅಗ್ನಿಶಾಮಕ ದಳದ ಜೊತೆ ಪೊಲೀಸರು, ಸ್ಥಳೀಯ ಅಧಿಕಾರಿಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.