ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಶಂಕೆ ಹಿನ್ನೆಲೆಯಲ್ಲಿ ವಿಮಾನವು ಮತ್ತೆ ದೆಹಲಿಗೆ ಹಿಂದಿರುಗಿದ್ದು, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಶಂಕೆ ಹಿನ್ನೆಲೆಯಲ್ಲಿ ವಿಮಾನವು ಮತ್ತೆ ದೆಹಲಿಗೆ ಹಿಂದಿರುಗಿದ್ದು, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
AI 807 ವಿಮಾನವು ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಐಜಿಐಎ) ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಹವಾ ನಿಯಂತ್ರಿತ ವ್ಯವಸ್ಥೆಯಲ್ಲಿ ಬೆಂಕಿಯ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಸುರಕ್ಷಿತವಾಗಿ ಸಂಜೆ 6.40ಕ್ಕೆ ಲ್ಯಾಂಡ್ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಯಾಣಿಕರು ಬೆಂಗಳೂರಿಗೆ ಪ್ರಯಾಣ ಬೆಳೆಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಏರ್ ಇಂಡಿಯಾ ತಿಳಿಸಿದೆ.