ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು ಸೇರಿದಂತೆ ಬಿಜೆಪಿ ಮುಖಂಡರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಎದುರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.

ಇದೇ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚದೇವ, ಘಟನೆ ಬಗ್ಗೆ ಸಿಎಂ ಅರವಿಂದ ಕೇಜ್ರಿವಾಲ್ ಅವರು ಮೌನ ವಹಿಸಿರುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸೋಮವಾರ ಪೊಲೀಸರಿಗೆ ಕರೆ ಮಾಡಿದ್ದ ಸ್ವಾತಿ ಮಾಲಿವಾಲ್, ಮುಖ್ಯಮಂತ್ರಿಯವರ ಕಚೇರಿಯ ಸಿಬ್ಬಂದಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ. ಪೊಲೀಸ್ ಠಾಣೆಗೆ ಹೋಗಿದ್ದರೂ ದೂರು ದಾಖಲಿಸಿರಲಿಲ್ಲ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರು ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಜೊತೆ 'ಅನುಚಿತವಾಗಿ' ವರ್ತಿಸಿರುವುದು ನಿಜ. ಈ ಪ್ರಕರಣದಲ್ಲಿ ಪಕ್ಷ ಕಠಿಣ ಕ್ರಮ ಜರುಗಿಸಲಿದೆ ಎಂದು ಎಎಪಿ ತಿಳಿಸಿದೆ.
ಈ ಕುರಿತು ಸ್ವಾತಿ ಮಾಲಿವಾಲ್, ಮುಖ್ಯಮಂತ್ರಿಗಳ ಕಚೇರಿ ಅಥವಾ ಎಎಪಿಯಿಂದ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಈ ಮಧ್ಯೆ, ಎಎಪಿಯ ಹಿರಿಯ ನಾಯಕ, ರಾಜ್ಯಸಭೆ ಸದಸ್ಯ ಸಂಜಯ್ ಕುಮಾರ್, 'ಇದು ಖಂಡನಾರ್ಹ ಘಟನೆ' ಎಂದು ಹೇಳಿದ್ದಾರೆ.
'ಸೋಮವಾರ ಮಾಲಿವಾಲ್ ಅವರು ಕೇಜ್ರಿವಾಲ್ ಭೇಟಿಗೆ ಅವರ ನಿವಾಸಕ್ಕೆ ಹೋಗಿದ್ದರು. ಆಗ, ಬಿಭವ್ ಕುಮಾರ್ ಅನುಚಿತವಾಗಿ ವರ್ತಿಸಿದ್ದಾರೆ. ಘಟನೆಯು ಕೇಜ್ರಿವಾಲ್ ಅವರ ಗಮನಕ್ಕೂ ಬಂದಿದ್ದು, ಕಠಿಣ ಕ್ರಮ ಜರುಗಿಸುವರು' ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.