ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಉಗ್ರರ ಸಹಚರನನ್ನು ಬಂಧಿಸಿದ್ದು, ಆತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸೇನೆ, ಬಿಎಸ್‌ಎಫ್ ಮತ್ತು ಪೊಲೀಸರ ಜಂಟಿ ತಂಡವು, ಬಾರಾಮುಲ್ಲಾ ಲೋಕಸಭಾ ಕ್ಷೇತ್ರದ ಭಾಗವಾಗಿರುವ ಕುಪ್ವಾರ ಜಿಲ್ಲೆಯಲ್ಲಿ ಇದೇ 20ರಂದು ನಡೆಯಲಿರುವ ಮತದಾನಕ್ಕೆ ಕೇವಲ ನಾಲ್ಕು ದಿನಗಳ ಮೊದಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.