ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದೆ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿಯವರ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ.

ಬಿಭವ್ ಕುಮಾರ್ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಕಳೆದ ತಿಂಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಾಲಿವಾಲ್ ದೂರು ನೀಡಿದ್ದರು.
ಬಂಧನ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ ಮತ್ತು ಬಂಧಿಸುವುದಕ್ಕೂ ಮುನ್ನ ಅಪರಾಧ ಪ್ರಕ್ರಿಯಾ ಸಂಹಿತೆ 'ಸೆಕ್ಷನ್ 41ಎ' ಅನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂದು ಘೋಷಿಸಬೇಕು ಎಂದು ಬಿಭವ್ ಪತ್ರದಲ್ಲಿ ಕೋರಿದ್ದರು.
ಬಿಭವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೋಮವಾರ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.