ಭುವನೇಶ್ವರ: ಒಡಿಶಾದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಬದಲಾಯಿಸಿದ್ದು, ನೀಲಗಿರಿ ವಿಧಾನಸಭಾ ಕ್ಷೇತ್ರದಿಂದ ಅಕ್ಷಯ ಆಚಾರ್ಯ ಅವರನ್ನು ಕಣಕ್ಕಿಳಿಸಿದೆ.
ಭುವನೇಶ್ವರ: ಒಡಿಶಾದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಬದಲಾಯಿಸಿದ್ದು, ನೀಲಗಿರಿ ವಿಧಾನಸಭಾ ಕ್ಷೇತ್ರದಿಂದ ಅಕ್ಷಯ ಆಚಾರ್ಯ ಅವರನ್ನು ಕಣಕ್ಕಿಳಿಸಿದೆ.
ದೇಬಾಶಿಶ್ ನಾಯಕ್, ಕಾಂಗ್ರೆಸ್ ವಕ್ತಾರ ಸುದರ್ಶನ್ ದಾಸ್, ಹಿಮಾಂಶು ಚೌಲಿಯಾ, ಸುದರ್ಶನ್ ಸಾಹೂ ಅವರನ್ನು ಹೊಸದಾಗಿ ಕಣಕ್ಕೆ ಇಳಿಸಲಾಗಿದೆ.
ಒಡಿಶಾದ 147 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 145 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಉಳಿದ 2 ಸ್ಥಾನಗಳನ್ನು ಜೆಎಂಎಂ ಮತ್ತು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ.
ಮೇ 13ರಿಂದ ಜೂನ್ 1ರವರೆಗೆ ನಾಲ್ಕು ಹಂತಗಳಲ್ಲಿ ಒಡಿಶಾದಲ್ಲಿ ಏಕಕಾಲದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.