ಮಂಜೇಶ್ವರ: ಎಲಿಯಾಣ ದೇರಂಬಳ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ದಶಮಾನೋತ್ಸವ ಕಾರ್ಯಕ್ರಮವು ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಜರಗಿತು. ಸೂರ್ಯೋದಯದಿಂದ ಸೂರ್ಯಾಸ್ತದ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಿತು. ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಕೊಂಡೆವೂರು ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಶ್ರೀದೇವಿಯು ನೆಲೆಸಿರುವ ಮಂದಿರದ ವಠಾರಕ್ಕೆ ಮಾತೃಗಿರಿ ಎಂಬ ನೂತನ ಹೆಸರನ್ನು ಘೋಷಿಸಿದರು. ದಶಮಾನೋತ್ಸವದ ಪ್ರಯುಕ್ತ ಮಂದಿರದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ವಸಂತ ಭಟ್ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ರಾಜಾರಾಮ್ ರಾವ್ ಶುಭ ಹಾರೈಸಿದರು. ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಧಾಕೃಷ್ಣ ಕೆ ವಿ ಸಭೆಯಲ್ಲಿ ಉಪಸ್ಥಿತರಿದ್ದರು. ಸತೀಶ್ಚಂದ್ರ ರೈ ಸ್ವಾಗತಿಸಿ, ವಂದಿಸಿದರು. ಲಕ್ಷ್ಮೀಶ ಬೊಳುಂಬು ಕಾರ್ಯಕ್ರಮವನ್ನು ನಿರೂಪಿಸಿದರು.