HEALTH TIPS

ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ

            ವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿತ್ರೋಡಾ ಅವರ ರಾಜೀನಾಮೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವೀಕರಿಸಿದ್ದಾರೆ. ಸ್ಯಾಮ್‌ ಪಿತ್ರೋಡಾ ಅವರು ಸ್ವಂತ ನಿರ್ಧಾರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

          ಲೋಕಸಭಾ ಚುನಾವಣೆಯ ನಡುವೆ ದೇಶದ ವಿವಿಧ ಭಾಗಗಳ ಭಾರತೀಯರು ಹೇಗೆ ಕಾಣುತ್ತಾರೆ ಎನ್ನುವ ಬಗ್ಗೆ ಸಂದರ್ಶನವೊಂದರಲ್ಲಿ ಪಿತ್ರೋಡಾ ನೀಡಿದ್ದ ಹೇಳಿಕೆ ರಾಜಕೀಯ ವಿವಾದವನ್ನು ಸೃಷ್ಟಿಸಿತ್ತು. ಪಿತ್ರೋಡಾ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರೂ ಖಂಡಿಸಿದ್ದರು.

             ಸದ್ಯ ಅಮೆರಿಕದಲ್ಲಿ ನೆಲೆಸಿರುವ ಸ್ಯಾಮ್‌ ಪಿತ್ರೋಡಾ, ರಾಜೀವ್‌ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಅವರ ಸಲಹಾಗಾರರಾಗಿ ಭಾರತದಲ್ಲಿ ಕೆಲಸ ಮಾಡಿದ್ದರು. 2004ರಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಭಾರತದ ರಾಷ್ಟ್ರೀಯ ಜ್ಞಾನ ಆಯೋಗದ ಮುಖ್ಯಸ್ಥರ ಹುದ್ದೆಗೆ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಿತ್ರೋಡಾ ಅವರನ್ನು ಆಹ್ವಾನಿಸಿದ್ದರು. 2009 ರಲ್ಲಿ, ಅವರು ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ಕುರಿತು ಮನಮೋಹನ್ ಸಿಂಗ್ ಅವರಿಗೆ ಸಲಹೆಗಾರರಾಗಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries