HEALTH TIPS

ಕೇರಳದ ಹಲವೆಡೆ ಭಾರಿ ಮಳೆ: ತಗ್ಗು ಪ್ರದೇಶಗಳಲ್ಲಿ ಪ್ರವಾಹ

          ಕೊಚ್ಚಿ: ಕೇರಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ನಗರಗಳ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಈ ಮಧ್ಯೆ ‌ರಾಜ್ಯದ ಎರಡು ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ ಸುಮಾರು 20 ಸೆ.ಮೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯು ಗುರುವಾರ ಮುನ್ನೆಚ್ಚರಿಕೆ ನೀಡಿದೆ.

          ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಗುರುವಾರ ಯಾವುದೇ ಸಾವು ಸಂಭವಿಸಿಲ್ಲ. ಪ್ರತಿ ವರ್ಷ ಮೇ ತಿಂಗಳಲ್ಲಿ ಸುರಿಯುವ ಮಳೆಗಿಂತ ಈ ಬಾರಿ ಶೇ 18ಕ್ಕಿಂತೂ ಹೆಚ್ಚಿನ ಪ್ರಮಾಣದ ಮಳೆ ಸುರಿದಿದೆ. 'ಹಠಾತ್‌ ಆಗಿ ಪ್ರವಾಹ ಉಂಟಾಗುವ ಸ್ಥಿತಿ ಇದೆ. ಜನರು ಎಚ್ಚರಿಕೆಯಿಂದ ಇರಬೇಕು' ಎಂದು ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಜನರಲ್ಲಿ ಮನವಿ ಮಾಡಿದ್ದಾರೆ.

           ಎರ್ನಾಕುಲಂ ಹಾಗೂ ತ್ರಿಶ್ಶೂರ್‌ ಜಿಲ್ಲೆಗಳಲ್ಲಿ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ. ಇದಕ್ಕೂ ಮೊದಲು ಇಲಾಖೆ ನೀಡಿದ್ದ ಮುನ್ನೆಚ್ಚರಿಕೆಯಲ್ಲಿ ಈ ಎರಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿತ್ತು. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

ಕೊಚ್ಚಿ ನಗರ ಪ್ರದೇಶದಲ್ಲಿ ಹೆಚ್ಚು ಪ್ರವಾಹ ಉಂಟಾಗಿದ್ದು, ಮನೆಗಳಿಗೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದೆ. ಕಸವನ್ನು ಎಲ್ಲೆಂದರಲ್ಲಿ ಬಿಸಾಡುವುದು ಹಾಗೂ ಸ್ಥಳಿಯಾಡಳಿತ ಕಸ ತೆರವು ಕಾರ್ಯವನ್ನು ಸರಿಯಾಗಿ ನಿರ್ವಹಿಸಿಲ್ಲ. ಇದರಿಂದಾಗಿ ಚರಂಡಿಗಳಲ್ಲಿ ಕಸ ತುಂಬಿಕೊಂಡಿದೆ. ನಗರ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಲು ಇದೇ ಕಾರಣ ಎನ್ನಲಾಗಿದೆ.

              ವಿಮಾನ ಹಾರಾಟದಲ್ಲಿ ವ್ಯತ್ಯಯ: ಕೋಯಿಕ್ಕೋಡ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟಗಳಲ್ಲಿ ವ್ಯತ್ಯಯವಾಗಿದೆ. ಗಲ್ಫ್‌ ರಾಷ್ಟ್ರಗಳಿಂದ, ಬೆಂಗಳೂರಿನಿಂದ ಕೋಯಿಕ್ಕೋಡಿಗೆ ಬರಬೇಕಿದ್ದ ವಿಮಾನಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ. ಇಲ್ಲಿಗೆ ಬಂದಿಳಿಯಬೇಕಿದ್ದ ಕೆಲವು ವಿಮಾನಗಳು ಮಂಗಳೂರು ಹಾಗೂ ಕೊಯಮತ್ತೂರು ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಗಿದೆ. ಇಲ್ಲಿಂದ ಇತರೆಡೆ ತೆರಳಬೇಕಿದ್ದ ವಿಮಾನ ಸಂಚಾರವನ್ನು ರದ್ದು ಮಾಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries