ಕಾಸರಗೋಡು: ವಿದ್ಯಾನಗರದಲ್ಲಿರುವ ಅಂಧರ ವಿದ್ಯಾಲಯದಲ್ಲಿ ದಿನವೇತನ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ನಡೆಸಲಾಗುವುದು. ಪುರುಷ ವಾರ್ಡನ್-1, ಮಹಿಳಾ ವಾರ್ಡನ್-1, ಅಡುಗೆಯವರು - 2 (ಪುರುಷ - 1, ಮಹಿಳೆ -1)ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಮೇ 31ರಂದು ಬೆಳಗ್ಗೆ 10ಕ್ಕೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ವಯೋಮಿತಿ 30 ರಿಂದ 50 ವರ್ಷಗಳಾಗಿದ್ದು, ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (9495462946, 9846162180)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಬೇಕೂರು ಶಾಲೆ:
ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾಜಶಾಸ್ತ್ರ (ಹಿರಿಯ), ರಸಾಯನ ಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಇಂಗ್ಲಿಷ್ ಜೂನಿಯರ್ ಶಿಕ್ಷಕರ ಹುದ್ದೆ ತೆರವಾಗಿದ್ದು, ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಜೂ. 3ರಂದು ಮಧ್ಯಾಹ್ನ 2ಗಂಟೆಗೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿರುವುದು. ಅರ್ಹ ಅಭ್ಯರ್ಥಿಗಳು ಮೂಲ ಪ್ರಮಾಣಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.