ಚೆನ್ನೈ: ತಮಿಳುನಾಡಿನಲ್ಲಿ ರಾಜಧಾನಿ ಚೆನ್ನೈ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ಚೆನ್ನೈ: ತಮಿಳುನಾಡಿನಲ್ಲಿ ರಾಜಧಾನಿ ಚೆನ್ನೈ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ.
ಕೋರ್ಟ್‌ಅಲ್ಲಂ ನಗರದ ಜಲಪಾತವೊಂದರಲ್ಲಿ ಸ್ನಾನಕ್ಕೆ ಇಳಿದಿದ್ದ 16 ವರ್ಷದ ಬಾಲಕನೊಬ್ಬ ನೀರಿನ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದು, ಆತನ ಪತ್ತೆಗೆ ಶೋಧಕಾರ್ಯ ನಡೆದಿದೆ.
ಹವಾಮಾನ ಇಲಾಖೆಯು ನೀಲಗಿರಿ ಜಿಲ್ಲೆಗೆ 'ಯೆಲ್ಲೋ ಅಲರ್ಟ್' ಎಚ್ಚರಿಕೆಯನ್ನು ನೀಡಿದೆ. ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
'ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಊಟಿಗೆ ಮೇ 18ರಿಂದ ಮೂರು ದಿನ ಪ್ರವಾಸಿಗರು ಭೇಟಿ ನೀಡಬಾರದು' ಎಂದು ಜಿಲ್ಲಾಧಿಕಾರಿ ಎಂ.ಅರುಣಾ ಅವರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.
ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜನರೂ ಜಾಗೃತರಾಗಿರಬೇಕು. ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರವಾಸಿಗರು ಬರದಿರುವುದು ಒಳಿತು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ತಿಳಿಸಿದರು.
ಊಟಿಯಲ್ಲಿ ಏಪ್ರಿಲ್ ಕೊನೆಯ ವಾರದಲ್ಲಿ ಗರಿಷ್ಠ ಅಂದರೆ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ನಾಲ್ಕು ತಿಂಗಳ ಹಿಂದೆ ಅಂದರೆ ಜನವರಿಯಲ್ಲಿ ಬಹುತೇಕ ಶೂನ್ಯ ಉಷ್ಣಾಂಶ ದಾಖ ಲಾಗಿತ್ತು. ತಾಪಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರುತ್ತಿದೆ.