ನವದೆಹಲಿ: ದಿವಂಗತ ಗ್ಯಾಂಗ್‌ಸ್ಟರ್ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಮಗ ಉಮರ್ ಅನ್ಸಾರಿಗೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನವದೆಹಲಿ: ದಿವಂಗತ ಗ್ಯಾಂಗ್‌ಸ್ಟರ್ ಮತ್ತು ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಮಗ ಉಮರ್ ಅನ್ಸಾರಿಗೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವಂತೆ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ.ಕೆ. ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.
ಜನವರಿ 25ರಂದು ಉಮರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ರಕ್ಷಣೆ ಒದಗಿಸಿತ್ತು.
ಕಳೆದ ವರ್ಷ ಡಿಸೆಂಬರ್ 19ರಂದು ಅನ್ಸಾರಿಗೆ ಜಾಮೀನು ನಿರಾಕರಿಸಿದ್ದ ಅಲಹಾಬಾದ್ ಹೈಕೋರ್ಟ್, ಸತ್ಯಾಂಶಗಳು ಮತ್ತು ಸಂದರ್ಭಗಳನ್ನು ಗಮನಿಸಿದರೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಕಂಡುಬರುತ್ತಿದೆ ಎಂದು ಹೇಳಿತ್ತು.
ನೀತಿ ಸಂಹಿತೆಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ಅಬ್ಬಾಸ್ ಅನ್ಸಾರಿ, ಉಮರ್ ಅನ್ಸಾರಿ ಮತ್ತು ಇತರೆ 150 ಮಂದಿ ವಿರುದ್ಧ 2022ರ ಮಾರ್ಚ್ 4ರಂದು ಉತ್ತರ ಪ್ರದೇಶದ ಮೌ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿತ್ತು.
ಜೈಲಿನಲ್ಲಿದ್ದ ಉಮರ್ ಅನ್ಸಾರಿ ತಂದೆ ಮುಖ್ತಾರ್ ಅನ್ಸಾರಿ ಇತ್ತೀಚೆಗೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.