ಕಾಸರಗೋಡು: ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾಸರಗೋಡಿನ ರಸ್ತೆಗಳಲ್ಲಿ ಕಾಣಿಸಿಕೊಂಡಿದ್ದು, ನೆಚ್ಚಿನ ನಟಿಯನ್ನು ಕಾಣಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.
ಕಾಸರಗೋಡು: ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾಸರಗೋಡಿನ ರಸ್ತೆಗಳಲ್ಲಿ ಕಾಣಿಸಿಕೊಂಡಿದ್ದು, ನೆಚ್ಚಿನ ನಟಿಯನ್ನು ಕಾಣಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.
ಇಷ್ಟಕ್ಕೂ ಸನ್ನಿಲಿಯೋನ್ ಕಾಸರಗೋಡಿಗೆ ಬಂದಿದ್ದೇಕೆ ಎಂಬ ಅನುಮಾನ ಮೂಡುವುದು ಸಹಜ. ಇಲ್ಲಿನ ಸೀತಂಗೋಳಿ ಸಮೀಪದ ಶೇಣಿ ಎಂಬಲ್ಲಿ ಸನ್ನಿ ಲಿಯೋನ್ ಅವರ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಹೀಗಾಗಿ ಆಕೆ ಕಾಸರಗೋಡಿಗೆ ಬಂದಿದ್ದಾರೆ.
ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಈ ಹಿನ್ನೆಲೆ ಮಾದಕ ನಟಿಯ ಅಭಿನಯವನ್ನು ನೋಡಲು ರಸ್ತೆಯ ಇಕ್ಕೆಲಗಳಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಚಿತ್ರತಂಡ ಹರಸಾಹಸ ಪಟ್ಟಿತು.