ನವದೆಹಲಿ: ಮಧ್ಯಂತರ ಜಾಮೀನು ದೊರೆತರೂ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್ ಸೂಚಿಸಿದೆ.
ನವದೆಹಲಿ: ಮಧ್ಯಂತರ ಜಾಮೀನು ದೊರೆತರೂ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್ ಸೂಚಿಸಿದೆ.
ಜೊತೆಗೆ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ಯಾವುದೇ ಹೇಳಿಕೆ ನೀಡುವಂತಿಲ್ಲ.
ಕೇಜ್ರಿವಾಲ್ ವಿರುದ್ಧ ಗಂಭೀರ ಆಪಾದನೆಗಳನ್ನು ಮಾಡಲಾಗಿದೆ. ಆದರೆ ಅವರು ದೋಷಿಯಾಗಿಲ್ಲ .ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮಗ್ರ ಮತ್ತು ಉದಾರ ದೃಷ್ಟಿಕೋನದಿಂದ ಜಾಮೀನು ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ನುಡಿದಿದೆ.
ವ್ಯಕ್ತಿಯೊಬ್ಬರ ಜಾಮೀನಿನೊಂದಿಗೆ ₹50 ಸಾವಿರ ಬಾಂಡ್ ಅನ್ನು ತಿಹಾರ್ ಜೈಲಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಕೇಜ್ರಿವಾಲ್ ಅವರಿಗೆ ಜೂನ್ 1ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.