ಕೊಚ್ಚಿ: ವಲ್ಲರ್‍ಪದಂ ಕಂಟೈನರ್ ಟರ್ಮಿನಲ್‍ಗೆ ಅತಿಕ್ರಮ ಪ್ರವೇಶ ಮಾಡಿದ್ದ ರμÁ್ಯದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರಷ್ಯಾದ ಪ್ರಜೆ ಇಲ್ಯಾ ಇಕಿಮೊವ್ (26) ಎಂಬಾತನನ್ನು ಮುಳವುಕಾಡ್ ಪೋಲೀಸರು ಬಂಧಿಸಿದ್ದಾರೆ.
ಹೆಚ್ಚಿನ ಭದ್ರತಾ ಪ್ರದೇಶದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಬಂಧಿತ ರಷ್ಯನ್ ಮಾದಕ ವ್ಯಸನಿಯಾಗಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ
ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಡಿಪಿ ವಲ್ರ್ಡ್ ನಿರ್ವಹಿಸುತ್ತಿರುವ ಅಂತರರಾಷ್ಟ್ರೀಯ ಕಂಟೈನರ್ ಟ್ರಾನ್ಸ್‍ಶಿಪ್‍ಮೆಂಟ್ ಟರ್ಮಿನಲ್‍ನ ಹೆಚ್ಚಿನ ಭದ್ರತಾ ಪ್ರದೇಶದಲ್ಲಿ ರಷ್ಯಾದ ಪ್ರಜೆ ಗೋಡೆಯ ಮೇಲೆ ಹಾರಿದ್ದಾನೆ. ಕೂಡಲೇ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.