ಆಗರ್ ಮಾಲ್ವಾ: ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸುರಕ್ಷಿತವಾಗಿ ಇರಿಸಲು ಮತ್ತು ಅವುಗಳ ಭದ್ರತೆಗೆ ಸಂಬಂಧಿಸಿದಂತೆ ಮಾಡಲಾಗಿರುವ ವ್ಯವಸ್ಥೆ ಕುರಿತು ತೃಪ್ತಿ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ ಸಿಂಗ್, ಮತಯಂತ್ರ 'ತಿದ್ದುವ' ಕೆಲಸಗಳು ಉನ್ನತ ಮಟ್ಟದಲ್ಲಿ ನಡೆಯುತ್ತವೆ ಎಂದು ಹೇಳಿದ್ದಾರೆ.
ಇವಿಎಂಗಳನ್ನು ಇರಿಸಲಾಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸುದ್ದಿಗಾರರ ಜತೆ ಮಾತನಾಡಿದರು.
'ಇವಿಎಂಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್‌ನಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಬಾರದು. ಈ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಎಚ್ಚರವಹಿಸಬೇಕು' ಎಂದು ಅವರು ಹೇಳಿದರು. ಸಿಂಗ್ ಅವರು ಈ ಹಿಂದೆ ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದರು.