ಮಧ್ಯಪ್ರದೇಶ: ಮರಳು ಮಾಫಿಯಾ ದಂಧೆಯಲ್ಲಿ ತೊಡಗಿರುವವರು ಟ್ರಾಕ್ಟರ್ ಹರಿಸಿ ಎಎಸ್ ಐ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಬಳಿ ಶನಿವಾರ ರಾತ್ರಿ ನಡೆದಿದೆ.
ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡ ಗ್ರಾಮಕ್ಕೆ ಆಗಮಿಸಿದ ನಂತರ ಟ್ರಾಕ್ಟರ್ ಹರಿಸಿ ಎಎಸ್‌ಐ ಹತ್ಯೆ ಮಾಡಲಾಗಿದೆ.
ಶಹದೋಲ್‌ನ ನೌಧಿಯಾದಲ್ಲಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್‌ಐ ಮಹೇಂದ್ರ ಬಗ್ರಿ ಮತ್ತು ಅವರ ತಂಡವು ವಾರಂಟ್‌ನೊಂದಿಗೆ ಆರೋಪಿಯನ್ನು ಬಂಧಿಸಲು ಹೋಗಿದ್ದಾಗ ಎಎಸ್ ಐ ಹತ್ಯೆ ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಾಗರ್ ತಿಳಿಸಿದ್ದಾರೆ.