ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ ವ್ಯಾಪ್ತಿಯ ಕಾರಡ್ಕ ಮತ್ತು ದೇಲಂಪಾಡಿಯಲ್ಲಿರುವ ಮೆಟ್ರಿಕ್ ಪೂರ್ವ ಹಾಸ್ಟೆಲ್‍ಗಳ (ಬಾಲಕರ) ಲ್ಲಿ ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಎರಡೂ ಹಾಸ್ಟೆಲ್‍ಗಳಲ್ಲಿ ಹಿರಿಯ ಪ್ರಾಥಮಿಕ ಹಂತದಲ್ಲಿ ತಲಾ ಮೂರು ಮತ್ತು ಪ್ರೌಢಶಾಲಾ ಹಂತದಲ್ಲಿ ಗಣಿತ, ನೈಸರ್ಗಿಕ ವಿಜ್ಞಾನ, ಭೌತ ವಿಜ್ಞಾನ, ಹಿಂದಿ, ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ತಲಾ ಆರು ಹುದ್ದೆಗಳು ಖಾಲಿ ಇವೆ. ಒಂದು ತಿಂಗಳಲ್ಲಿ 20 ಗಂಟೆಗಳ ತರಗತಿಗಳನ್ನು ಬೆಳಿಗ್ಗೆ ಅಥವಾ ಸಂಜೆ ತೆಗೆದುಕೊಳ್ಳಬೇಕು. ಅರ್ಹ ಅಭ್ಯರ್ಥಿಗಳು ಮೇ 30 ರೊಳಗೆ ಕಾರಡ್ಕ ಬ್ಲಾಕ್ ಪಂಚಾಯತಿಯಲ್ಲಿರುವ ಪರಿಶಿಷ್ಟ ಜಾತಿ ಅಭಿವೃದ್ಧಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.