ಚಂಡೀಗಢ/ಅಮೃತಸರ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಗುರುವಾರ ಅಮೃತಸರದ ಸ್ವರ್ಣ ಮಂದಿರ(ಗೋಲ್ಡನ್ ಟೆಂಪಲ್)ದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಅಮೃತಸರದ ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಅರವಿಂದ ಕೇಜ್ರಿವಾಲ್
0
ಮೇ 17, 2024
Tags
ಚಂಡೀಗಢ/ಅಮೃತಸರ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ಗುರುವಾರ ಅಮೃತಸರದ ಸ್ವರ್ಣ ಮಂದಿರ(ಗೋಲ್ಡನ್ ಟೆಂಪಲ್)ದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ಕೇಜ್ರಿವಾಲ್ ಅವರ ಮೊದಲ ರಾಜ್ಯ(ಪಂಜಾಬ್) ಭೇಟಿ ಇದಾಗಿದೆ.
ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ದುರ್ಗಿಯಾನ ದೇವಸ್ಥಾನದಲ್ಲಿಯೂ ಪೂಜೆ ಸಲ್ಲಿಸಿದರು. ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಮತ್ತು ಪಕ್ಷದ ಅಮೃತಸರ ಅಭ್ಯರ್ಥಿ ಕುಲದೀಪ್ ಸಿಂಗ್ ಧಲಿವಾಲ್ ಜೊತೆಗಿದ್ದರು.
ಧಲಿವಾಲ್ ಪರ ಕೇಜ್ರಿವಾಲ್ ಅಮೃತಸರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪಂಜಾಬ್‌ನ 13 ಲೋಕಸಭಾ ಸ್ಥಾನಗಳಿಗೆ ಜೂನ್ 1 ರಂದು ಮತದಾನ ನಡೆಯಲಿದೆ.