ಉಪ್ಪಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಸಂಸ್ಥೆಯು ಪಟ್ಲ ಯಕ್ಷಾಶ್ರಯ ಯೋಜನೆಯ ವತಿಯಿಂದ ಆರ್ಥಿಕ ಸಂಕಷ್ಟದಲ್ಲಿರುವ ಯಕ್ಷಗಾನ ಕಲಾವಿದರಿಗೆ ಗೃಹನಿರ್ಮಾಣಕ್ಕೆ ಆರ್ಥಿಕ ಸಹಾಯ ನೀಡುತ್ತಿದ್ದು, ಹನುಮಗಿರಿ ಮೇಳದ ಚಕ್ರತಾಳ ಕಲಾವಿದ ನಿಶ್ವತ್ ಜೋಗಿ ಜೋಡುಕಲ್ಲು ಅವರಿಗೆ ರೂ. ಐದು ಲಕ್ಷ ಮೊತ್ತವನ್ನು ಮಂಗಳೂರು ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ ಕಾರ್ಯಕ್ರಮದಲ್ಲಿ ಖ್ಯಾತ ಚಲಚಿತ್ರ ತಾರೆ ಸುದೀಪ್ ಅವರು ಹಸ್ತಾಂತರಿಸಿದರು. ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ, ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಮುಂತಾದ ಗಣ್ಯರು ಉಪಸ್ಥಿತರಿದ್ದರು.