ಸರನ್: ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ 5ನೇ ಹಂತದ ಮತದಾನದ ಬಳಿಕ ಹಿಂಸಾಚಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸರನ್: ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ 5ನೇ ಹಂತದ ಮತದಾನದ ಬಳಿಕ ಹಿಂಸಾಚಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಿಖಾರಿ ಠಾಕೂರ್ ಚೌಕ್ ಬಳಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟ್ನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳಾ ತಿಳಿಸಿದ್ದಾರೆ.
ಮೂವರ ಬಂಧನ, ಇಂಟರ್ನೆಟ್ ಸ್ಥಗಿತ:
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಅಲ್ಲದೇ ಹಿಂಸಾಚಾರವನ್ನು ತಡೆಯಲು ಜಿಲ್ಲೆಯಲ್ಲಿ ಇಂಟರ್ನೆಟ್ ಸಹ ಸ್ಥಗಿತಗೊಳಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಸರನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ವಿರುದ್ಧ ಮಹಾಘಟಬಂಧನ್ ಅಭ್ಯರ್ಥಿಯಾಗಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ರೋಹಿಣಿ ಆಚಾರ್ಯ ಸ್ಪರ್ಧಿಸಿದ್ದರು.