HEALTH TIPS

ಆಂಧ್ರಪ್ರದೇಶ: ವೃದ್ಧೆಯನ್ನು ಡೋಲಿಯಲ್ಲಿ ಹೊತ್ತುಕೊಂಡು ಬಂದು ಮತದಾನ ಮಾಡಿಸಿದರು

             ಹೈದರಾಬಾದ್‌: ಲೋಕಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಆಂಧ್ರ ಪ್ರದೇಶದ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ..

             ಈ ನಡುವೆ ಬುಡಕಟ್ಟು ಸಮುದಾಯಕ್ಕೆ ಸೇರಿದ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಮತಗಟ್ಟೆ ತರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.


             ಸರಿಯಾದ ರಸ್ತೆ ಸಂಪರ್ಕವಿಲ್ಲದೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದವರಿಗೆ ಮತ ಚಲಾಯಿಸುವುದೇ ಒಂದು ದೊಡ್ಡ ಸಮಸ್ಯೆಯಾಗಿದೆ. ಈ ನಡುವೆ ಕಲ್ಲು ಮುಳ್ಳಿನ ಹಾದಿಯಲ್ಲಿ ವೃದ್ಧೆಯೊಬ್ಬರನ್ನು ಡೋಲಿ ಮೂಲಕ ಹೆಗಲ ಮೇಲೆ ಹೊತ್ತುಕೊಂಡು ಮತಗಟ್ಟೆಗೆ ಕರೆತಂದಿದ್ದಾರೆ.

                 ಚುನಾವಣೆ ಸಂದರ್ಭ ಕೆಲವೆಡೆ ಹಿಂಸಾಚಾರ ಪ್ರಕರಣಗಳು ವರದಿಯಾಗಿವೆ. ಇನ್ನೊಂದೆಡೆ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಕೇಳಿಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries