ಚೆನ್ನೈ: ತಮಿಳುನಾಡಿನ ಮೊದಲ ಬಿಜೆಪಿ ಶಾಸಕ ಸಿ. ವೇಲಾಯುಧನ್ ಬುಧವಾರ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಚೆನ್ನೈ: ತಮಿಳುನಾಡಿನ ಮೊದಲ ಬಿಜೆಪಿ ಶಾಸಕ ಸಿ. ವೇಲಾಯುಧನ್ ಬುಧವಾರ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
1996ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕನ್ಯಾಕುಮಾರಿ ಜಿಲ್ಲೆಯ ಪದ್ಮನಾಭಪುರಂ ವಿಧಾನಸಭಾ ಕ್ಷೇತ್ರದಿಂದ ವೇಲಾಯುಧನ್ ಶಾಸಕರಾಗಿ ಆಯ್ಕೆಯಾಗಿದ್ದರು. ಡಿಎಂಕೆ ಪಕ್ಷದ ಅಭ್ಯರ್ಥಿಯನ್ನು 4,540 ಮತಗಳಿಂದ ಸೋಲಿಸಿದ್ದರು. ಬಿಜೆಪಿಯ ಮೊದಲ ಶಾಸಕರಾಗಿ ಅವರು ವಿಧಾನಸಭೆ ಪ್ರವೇಶಿಸಿದ್ದರು.
ವೇಲಾಯುಧನ್ ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡಿದ್ದರು. ಆರ್‌ಎಸ್‌ಎಸ್ ಅಂಗಸಂಸ್ಥೆಯಾದ ಸೇವಾ ಭಾರತಿಯಲ್ಲಿ ಅವರು ಕೆಲಸ ಮಾಡಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ ವೇಲಾಯುಧನ್ ಭಾಗವಹಿಸಿದ್ದರು.