ನವದೆಹಲಿ: ಇಂದು (ಸೋಮವಾರ) ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 60ನೇ ಪುಣ್ಯತಿಥಿ. ಈ ಅಂಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೆಹರೂ ಅವರ ಸ್ಮಾರಕ 'ಶಾಂತಿವನ'ಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ನವದೆಹಲಿ: ಇಂದು (ಸೋಮವಾರ) ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 60ನೇ ಪುಣ್ಯತಿಥಿ. ಈ ಅಂಗವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನೆಹರೂ ಅವರ ಸ್ಮಾರಕ 'ಶಾಂತಿವನ'ಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, 'ವೈಜ್ಞಾನಿಕ, ಆರ್ಥಿಕ, ಕೈಗಾರಿಕಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಮುನ್ನಡೆಸಿದ, ಪ್ರಜಾಪ್ರಭುತ್ವದ ಸಮರ್ಪಿತ ಕಾವಲುಗಾರ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಹಾಗೂ ಆಧುನಿಕ ಭಾರತದ ವಾಸ್ತುಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅನುಪಮ ಕೊಡುಗೆಯಿಲ್ಲದೆ ಭಾರತದ ಇತಿಹಾಸ ಅಪೂರ್ಣವಾಗಿದೆ. ಅವರು ಸ್ಫೂರ್ತಿಯ ಮೂಲ. ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು' ಎಂದು ಬರೆದುಕೊಂಡಿದ್ದಾರೆ.
'ದೇಶದ ರಕ್ಷಣೆ, ಪ್ರಗತಿ ಮತ್ತು ಏಕತೆ ನಮ್ಮೆಲ್ಲರ ರಾಷ್ಟ್ರೀಯ ಧರ್ಮ. ನಾವು ವಿವಿಧ ಧರ್ಮಗಳನ್ನು ಅನುಸರಿಸಬಹುದು, ವಿವಿಧ ರಾಜ್ಯಗಳಲ್ಲಿ ವಾಸಿಸಬಹುದು, ವಿವಿಧ ಭಾಷೆಗಳನ್ನು ಮಾತನಾಡಬಹುದು. ಆದರೆ ಅದು ನಮ್ಮ ನಡುವೆ ಯಾವುದೇ ಗೋಡೆಯನ್ನು ಸೃಷ್ಟಿಸಬಾರದು. ದೇಶದಲ್ಲಿ ಕೆಲವರು ಶ್ರೀಮಂತರು ಮತ್ತು ಹೆಚ್ಚಿನವರು ಬಡವರಾಗಿರಬೇಕು ಎಂದು ನಾವು ಬಯಸುವುದಿಲ್ಲ. ಎಲ್ಲಾರೂ ಸಮಾನ ಅವಕಾಶ ಪಡೆಯಬೇಕು' ಎಂದು ನೆಹರೂ ಹೇಳಿದ್ದರು. ಇಂದಿಗೂ ಕಾಂಗ್ರೆಸ್ ಅದೇ ನ್ಯಾಯ ಮಾರ್ಗದಲ್ಲಿ ಸಾಗುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.
'ಆಧುನಿಕ ಭಾರತದ ವಾಸ್ತುಶಿಲ್ಪಿ ಮತ್ತು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಗೌರವಪೂರ್ವಕ ನಮನಗಳು. ದಾರ್ಶನಿಕರಾಗಿ, ಅವರು ತಮ್ಮ ಇಡೀ ಜೀವನವನ್ನು ಸ್ವಾತಂತ್ರ್ಯ ಚಳವಳಿಗಾಗಿ ಮುಡಿಪಾಗಿಟ್ಟರು. ಅವರ ತತ್ವಗಳು ನಮಗೆ ಯಾವಾಗಲೂ ಮಾರ್ಗದರ್ಶನ ನೀಡುತ್ತವೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ನೆಹರೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
1947ರ ಆಗಸ್ಟ್ 15ರಂದು ಸ್ವಾತಂತ್ರ್ಯಭಾರತದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನೆಹರು ಅವರು 1964ರ ವರೆಗೂ ಅಧಿಕಾರದಲ್ಲಿದರು. ಅದೇ ವರ್ಷ ಮೇ 27ರಂದು ನಿಧನರಾದರು.