HEALTH TIPS

ಮಾಲ್ದೀವ್ಸ್‌ನಿಂದ ಭಾರತದ ಸೇನೆ ಸಂಪೂರ್ಣ ವಾಪಸ್: ಮುಯಿಝು ವಕ್ತಾರ

              ಮಾಲೆ : ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ನೀಡಿರುವ ಗಡುವಿನಂತೆ, ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ದೀವ್ಸ್‌ನಿಂದ ಹಿಂದಕ್ಕೆ ಕರೆಸಿಕೊಂಡಿದೆ ಎಂದು ಮಾಲ್ದೀವ್ಸ್‌ ಸರ್ಕಾರ ತಿಳಿಸಿದೆ.

              ಚೀನಾ ಪರ ಧೋರಣೆಯುಳ್ಳ ನಾಯಕರಾಗಿ ಗುರುತಿಸಿಕೊಂಡಿರುವ ಮುಯಿಝು, ಮೇ 10ರೊಳಗೆ ಭಾರತವು ತನ್ನ ಸಂಪೂರ್ಣ ಮಿಲಿಟರಿ ಸಿಬ್ಬಂದಿಯನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಗಡುವು ನೀಡಿದ್ದರು.

             ಭಾರತೀಯ ಸೇನಾ ಸಿಬ್ಬಂದಿಯನ್ನು ವಾಪಸ್‌ ಕಳುಹಿಸುವುದಾಗಿ ಅವರು, ಕಳೆದ ವರ್ಷ ನಡೆದ ಅಧ್ಯಕ್ಷೀಯ ಚುನಾವಣೆ ವೇಳೆ ಭರವಸೆ ನೀಡಿದ್ದರು.

             ಮಾಲ್ದೀವ್ಸ್‌ನಲ್ಲಿದ್ದ ಭಾರತೀಯ ಸೈನಿಕರ ಕೊನೇ ತಂಡವನ್ನು ವಾಪಸ್‌ ಕಳುಹಿಸಲಾಗಿದೆ ಎಂದು ಅಧ್ಯಕ್ಷರ ಕಚೇರಿಯ ಮುಖ್ಯ ವಕ್ತಾರೆ ಹೀನಾ ವಾಲೀದ್ ಅವರು ಸನ್‌.ಎಂವಿ (Sun.mv) ಸುದ್ದಿ ತಾಣಕ್ಕೆ ತಿಳಿಸಿದ್ದಾರೆ.

                 ದೇಶದಲ್ಲಿ ಎಷ್ಟು ಮಂದಿ ಭಾರತೀಯ ಸೇನೆಯ ಯೋಧರು ನೆಲೆಯೂರಿದ್ದರು ಎಂಬ ವಿವರವನ್ನು ನಂತರ ಬಹಿರಂಗಪಡಿಸಲಾಗುವುದು ಎಂದೂ ಹೇಳಿದ್ದಾರೆ.

ಭಾರತವು ತನ್ನ 51 ಯೋಧರನ್ನು ವಾಪಸ್‌ ಕರೆಯಿಸಿಕೊಂಡಿದೆ ಎಂದು ಮಾಲ್ದೀವ್ಸ್‌ ಇದೇ ವಾರ ಪ್ರಕಟಿಸಿತ್ತು.

                ಭಾರತ ಸರ್ಕಾರ ಈ ಹಿಂದೆ ಉಡುಗೊರೆಯಾಗಿದ್ದ ನೀಡಿದ್ದ ಎರಡು ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್‌ ಯುದ್ಧ ವಿಮಾನಗಳ ನಿರ್ವಹಣೆ ಸಲುವಾಗಿ ಭಾರತೀಯ ಸೇನಾ ಸಿಬ್ಬಂದಿ ಮಾಲ್ದೀವ್ಸ್‌ನಲ್ಲಿ ಉಳಿದುಕೊಂಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries