ಜಮ್ಮು : ಪಾಕಿಸ್ತಾನದಿಂದ ನಿಷೇಧಿತ ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) 10ನೇ ಆರೋಪಿಯನ್ನು ಪಟ್ಟಿ ಮಾಡಿದೆ.
ಜಮ್ಮು : ಪಾಕಿಸ್ತಾನದಿಂದ ನಿಷೇಧಿತ ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಗೆ ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನು ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) 10ನೇ ಆರೋಪಿಯನ್ನು ಪಟ್ಟಿ ಮಾಡಿದೆ.
ಈ ಕುರಿತು 2022ರಲ್ಲಿ ದಾಖಲಿಸಿಕೊಂಡ ಪ್ರಕರಣದ ಕುರಿತು ಎನ್‌ಐಎ, ಜಮ್ಮುವಿನಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪಪಟ್ಟಿಯನ್ನು ಸಲ್ಲಿಸಿದೆ.
ಪಾಕಿಸ್ತಾನದ ಡ್ರೋನ್‌ಗಳು ತರುವ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಸರಕನ್ನು ಸಂಗ್ರಹಿಸಿ, ಅವುಗಳನ್ನು ಪೂರೈಸಲು ಆರೋಪಿ ಹುಸೇನ್ ಎಲ್‌ಇಟಿ ಉಗ್ರರಿಗೆ ಸಹಕಾರ ನೀಡುತ್ತಿದ್ದ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.
ಐಪಿಸಿಯ ವಿವಿಧ ಸೆಕ್ಷನ್‌ಗಳು, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಯಡಿ ಈಗಾಗಲೇ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ಇತರ ಒಂಬತ್ತು ಆರೋಪಿಗಳ ಹೆಸರನ್ನು ಸೇರಿಸಲಾಗಿತ್ತು.