ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, 4 ಮಂದಿ ಗಾಯಗೊಂಡಿದ್ದಾರೆ.
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, 4 ಮಂದಿ ಗಾಯಗೊಂಡಿದ್ದಾರೆ.
ಅನಂತ್‌ನಾಗ್-ರಜೌರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ 3 ವಾರಗಳು ಬಾಕಿ ಉಳಿದಿದ್ದು, ಈ ದಾಳಿ ಕಣಿವೆಯ ಜನರನ್ನು ಆತಂಕಕ್ಕೆ ಈಡುಮಾಡಿದೆ. ಪೂಂಚ್ ಸಹ ಇದೇ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ.
ವಾಯುಪಡೆಯ ವಾಹನಗಳು ಪೂಂಚ್‌ನ ಸುರಾನ್‌ಕೋಟ್ ಪ್ರದೇಶದಿಂದ ಸನಾಯ್ ಕಡೆಗೆ ತೆರಳುತ್ತಿದ್ದಾಗ ನಾಲ್ವರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಐವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡರು. ಅದರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡ ಇಬ್ಬರ ಪೈಕಿ ಒಬ್ಬ ಯೋಧ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭದಲ್ಲೇ ಮೃತಪಟ್ಟಿದ್ದಾರೆ.
'ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಶಾಸಿತಾರ್ ಬಳಿ ಭಾರತೀಯ ವಾಯುಪಡೆಯ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ಪ್ರದೇಶವನ್ನು ಸುತ್ತುವರಿದು, ಉಗ್ರರಿಗಾಗಿ ಶೋಧ ನಡೆಸಲಾಗುತ್ತಿದೆ'ಎಂದು ಸ್ಥಳೀಯ ಮಿಲಿಟಿರಿ ಘಟಕ ಹೇಳಿದೆ.
ಶನಿವಾರ ಸಂಜೆ 6.15ರ ಸುಮಾರಿಗೆ ವಾಯುಪಡೆಯ ಕೇಂದ್ರಕ್ಕೆ ಹಿಂದಿರುಗುತ್ತಿದ್ದಾಗ ಈ ದಾಳಿ ನಡೆದಿದೆ.