ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಹಲವಾರು ಭಯೋತ್ಪಾದಕ ದಾಳಿಗಳನ್ನು ನಡೆಸಿದ್ದ ಲಷ್ಕರ್-ಇ-ತಯಬಾ ಉಗ್ರ ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ರಾಜ್ಯ ತನಿಖಾ ಸಂಸ್ಥೆಯು (ಎಸ್‌ಐಎ) ಶುಕ್ರವಾರ ಪೂರಕ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್ ಖಾಸಿಮ್ ಅಲಿಯಾಸ್ ಸಲ್ಮಾನ್ ಮತ್ತು ತಾಲಿಬ್ ಹುಸೇನ್ ಶಾ ಎಂಬುವವರ ವಿರುದ್ಧ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲಾಗಿದೆ. 1990ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಖಾಸಿಮ್, ಅಲ್ಲಿ ಸಶ್ತ್ರಾಸ್ತ್ರ ಬಳಕೆ ತರಬೇತಿ ಪಡೆದಿದ್ದ. ತಾಲಿಬ್‌ನನ್ನು ಈ ಹಿಂದೆ ಸಶ್ತ್ರಾಸ್ತ್ರಗಳ ಜೊತೆಯೇ ಬಂಧಿಸಲಾಗಿತ್ತು ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಕೊಲೆ, ಗ್ರನೇಡ್ ದಾಳಿ ಮತ್ತು ಜನನಿಬಿಡ ಸ್ಥಳಗಳಲ್ಲಿ ಕಚ್ಚಾ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಎಸಗಿರುವ ಉಗ್ರ ಕೃತ್ಯಗಳಿಂದ ಸರ್ಕಾರದ ಸ್ವತ್ತುಗಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ 29ರಂದು ಇವರಿಬ್ಬರ ವಿರುದ್ಧ ಎಸ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.