ನವದೆಹಲಿ: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್ ಬಾರ್ ಅಸೋಶಿಯೇಷನ್‌ನ (SCBA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನವದೆಹಲಿ: ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಅವರು ಸುಪ್ರೀಂಕೋರ್ಟ್ ಬಾರ್ ಅಸೋಶಿಯೇಷನ್‌ನ (SCBA) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಸೋಶಿಯೇಷನ್‌ಗೆ ಗುರುವಾರ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಕಪಿಲ್ ಸಿಬಲ್ ಅವರು 1,000 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ ಪ್ರದೀಪ್ ಕುಮಾರ್ ರಾಯ್ ಅವರು 650 ಮತಗಳನ್ನು ಪಡೆದು ಸೋಲು ಕಂಡರು.
ಹಾರ್ವರ್ಡ್ ಲಾ ಸ್ಕೂಲ್‌ನ ಪದವೀಧರರಾಗಿರುವ ಸಿಬಲ್ ಅವರು, 1983ರಿಂದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೇ ಅವರು ಈ ಮೊದಲು SCBA ಗೆ ಮೂರು ಬಾರಿ ಅಧ್ಯಕ್ಷರಾಗಿದ್ದರು.
ಈ ಬಾರ್ ಅಸೋಶಿಯೇಷನ್‌ನ ಕಾರ್ಯಕಾರಿ ಮಂಡಳಿಯಲ್ಲಿ ಮಹಿಳೆಯರಿಗೂ ಸ್ಥಾನಗಳನ್ನು ಮೀಸಲಿಡಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ನಿರ್ದೇಶನ ನೀಡಿತ್ತು.
ಯುಪಿಎ ಸರ್ಕಾರದ ಅವಧಿಯಲ್ಲಿ ಕಪಿಲ್ ಸಿಬಲ್ ಅವರು ಕೇಂದ್ರದಲ್ಲಿ ಸಚಿವರಾಗಿದ್ದರು. ಪ್ರಕರಣಗಳಿಗೆ ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹಿರಿಯ ವಕೀಲ ಎನಿಸಿಕೊಂಡಿದ್ದಾರೆ.