ಕಾಸರಗೋಡು: ಈ ಬಾರಿಯ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕಾಞಂಗಾಡು ಉಪಜಿಲ್ಲೆ ಐತಿಹಾಸಿಕ ಸಾಧನೆಗೆ ಕಾರಣವಾಗಿದೆ. 2023-24ನೇ ಸಾಲಿನಲ್ಲಿ ನಡೆದ ಎಸ್ಸೆಸೆಲ್ಸಿ ಪರೀಕ್ಷೆಗೆ ನೊಂದಾಯಿಸಿದ ಪ.ಜಾತಿ ಹಾಗೂ ಪ.ವರ್ಗದ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ. 99.97 ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಅರ್ಹತೆ ಪಡೆದುಕೊಳ್ಳುವ ಮೂಲಕ ಶೇಕಡಾವಾರು ಮಟ್ಟದಲ್ಲಿ ಉಪಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ.
20 ಮಕ್ಕಳು ಎಲ್ಲಾ ವಿಷಯಗಳಲ್ಲಿ 'ಎ'ಪ್ಲಸ್ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಞಂಗಾಡ್ ಉಪಜಿಲ್ಲಾ ವಲಯದ ಪರಿಶಿಷ್ಟ ಜಾತಿ,ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಯಶಸ್ಸು ಗಳಿಸುವ ಮೂಲಕ ಮಹತ್ವದ ಸಾಧನೆಗೆ ಕಾರಣವಾಗಿದೆ. ಕಾಞಂಗಾಡು ಉಪಜಿಲ್ಲೆ ಯಲ್ಲಿ ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ವಲಯದ 77 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.