ತಿರುವನಂತಪುರ: ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕೇರಳದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.
ಭಾರಿ ಮಳೆ ಮುನ್ಸೂಚನೆ: ಕಾಸರಗೋಡು ಸಹಿತ ಕೇರಳದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
0
ಮೇ 23, 2024
Tags
ತಿರುವನಂತಪುರ: ಭಾರಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಕೇರಳದ ಇಡುಕ್ಕಿ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.
ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿದ್ದು ಈ ಎರಡು ಜಿಲ್ಲೆಗಳಿಗೆ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ಇನ್ನುಳಿದಂತೆ ತಿರುವನಂತಪುರ, ಕೊಲ್ಲಂ, ಆಳಪ್ಪುಳ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೊಡ್ ಮತ್ತು ವಯನಾಡಿಗೆ ಆರಂಜ್ ಅಲರ್ಟ್ ನೀಡಲಾಗಿದ್ದು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಸಾಂಕ್ರಾಮಿಕ ರೋಗಗಳ ಹರಡುವಿಕೆ ತಪ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
24 ಗಂಟೆಯ ಅವಧಿಯಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಮಳೆಯಾದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ. 11 -20 ಸೆಂ.ಮೀ. ಮಳೆಯಾದರೆ ಆರೆಂಜ್ ಅಲರ್ಟ್ ಮತ್ತು 6-11 ಸೆಂ.ಮೀ. ಮಳೆಯಾದರೆ ಯೆಲ್ಲೊ ಅಲರ್ಟ್ ಎಂದು ಸೂಚನೆ ನೀಡಲಾಗುತ್ತದೆ.