ಪೆರ್ಲ: ಪೆರ್ಲ ಶ್ರೀಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ರಕ್ಷಕರ ಹಾಗೂ ಶಿಕ್ಷಕರ ಸಂಘದ ಸಭೆ ಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ಜರುಗಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಶೋತ್ತಮ ಪೆರ್ಲ ಅಧ್ಯಕ್ಷತೆ ವಹಿಸಿದ್ದರು.
ಆಡಳಿತ ಮಂಡಳಿಯ ಉಪಾದ್ಯಕ್ಷ ಸದಾಶಿವ ಭಟ್ ಹರಿನಿಲಯ, ಶಾಲಾ ರಕ್ಷಕ ಶೀಕ್ಷಕ ಸಂಘದ ಉಪಾಧ್ಯಕ್ಷ ನಾರಾಯಣ ನಾಯಕ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಎನ್ ಕೇಶವಪ್ರಕಾಶ್ ಅವರು 2024-25ನೇ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆಗಳ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕರಾದ ಮಹಾಬಲ ಭಟ್ ಹಾಗೂ ಕೃಷ್ಣ ಪ್ರಕಾಶ್ ರಕ್ಷಕರಿಗೆ ಮಾದಕ ವ್ಯಸನ, ಹೆಚ್ಚಾಗಿ ಮೊಬೈಲ್ ಬಳಕಯಿಂದ ಉಂಟಾಗುವ ದುಷ್ಪರಿಣಾಮ, ಮಕ್ಕಳ ಆರೋಗ್ಯ ಸಮಸ್ಯೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಶಾಲಾ ಶಿಕ್ಷಕರು, ಹೆತ್ತವರು ಉಪಸ್ಥಿತರಿದ್ದರು. ಅಧ್ಯಾಪಕ ಕೃಷ್ಣರಾಜ ಸ್ವಾಗತಿಸಿದರು . ಅಧ್ಯಾಪಕರಾದ ಶ್ರೀ ವೇಣು ಗೋಪಾಲ ವಂದಿಸಿದರು.