ಕುಂಬಳೆ: ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಮಂಜೇಶ್ವರ ತಾಲೂಕು ಸಮಿತಿಯ ಆಶ್ರಯದಲ್ಲಿ ಹೊಲಿಗೆ ಯಂತ್ರ ವಿತರಣೆ ಹಾಗೂ ಶಾಸಕರ ಸನ್ಮಾನ ಗುರುವಾರ ಕುಂಬಳೆಯಲ್ಲಿ ನಡೆಯಲಿದೆ ಎಂದು ಪದಾಧಿಕಾರಿಗಳು ಕುಂಬಳೆ ಪ್ರೆಸ್ ಪೋರಂನಲ್ಲಿ ನಿನ್ನೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕುಂಬಳೆ ವ್ಯಾಪಾರಿ ಭÀವನದಲ್ಲಿ ಬೆಳಗ್ಗೆ 10.30 ಕ್ಕೆ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸುವರು. ಐವರು ಬಡ ಟೈಲರ್ ಗಳಿಗೆ ಹೊಲಿಗೆ ಯಂತ್ರವನ್ನು ಶಾಸಕರು ಈ ಸಂದರ್ಭ ವಿತರಿಸಿ ಉದ್ಘಾಟಿಸುವರು.
ತಾಲೂಕು ಸಮಿತಿ ಅಧ್ಯಕ್ಷ ರಾಮನ್ ಪೆÇಯ್ಯಕಂಡಂ ಅಧ್ಯಕ್ಷತೆ ವಹಿಸುವರು. ಐದು ತಿಂಗಳಿನಿಂದ ಕಾರ್ಮಿಕರಿಗೆ ಪಿಂಚಣಿ ನೀಡಲು ವಿಳಂಬವಾಗಿದ್ದು, ಶೀಘ್ರ ವಿತರಿಸಬೇಕು ಎಂದು ಪದಾಧಿಕಾರಿಗಳು ಒತ್ತಾಯಿಸಿದರು.
ಕೆಎಸ್‍ಟಿಎ ಮಾಜಿ ರಾಜ್ಯಾಧ್ಯಕ್ಷ ರಾಮನ್ ಚೆನ್ನಿಕ್ಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್, ರಾಜ್ಯ ಕಾರ್ಯದರ್ಶಿ ಮೋಹನ್, ರಾಜ್ಯ ಸಮಿತಿ ಮಾಜಿ ಸದಸ್ಯ ಬಾಲಕೃಷ್ಣ ಶೆಟ್ಟಿ, ರಾಮನ್ ಪೆÇಯ್ಯಕಂಡ, ಪ್ರಧಾನ ಕಾರ್ಯದರ್ಶಿ ಸತೀಶ ಆಚಾರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.