ಜಗದೇವ್ ತಮ್ಮ ಪತ್ನಿಯೊಂದಿಗೆ ಮತಗಟ್ಟೆಗೆ ತೆರಳಿದ್ದರಿಂದ ಆದರೆ ಇವಿಎಂ ಕೈಕೊಟ್ಟ ಕಾರಣ, ಅವರು ಮತ ಚಲಾಯಿಸಲು ಸ್ವಲ್ಪ ಸಮಯ ಕಾಯಬೇಕಾಯಿತು. ಕೂಡಲೇ ಚುನಾವಣಾಧಿಕಾರಿಯೊಂದಿಗೆ ನಡುವೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ನಡುವೆ ಅವರು ಇವಿಎಂ ನ್ನು ಟೇಬಲ್‌ನಿಂದ ಎಳೆದಿದ್ದಾರೆ. ಇದರ ಪರಿಣಾಮವಾಗಿ ಅದು ಬಿದ್ದು ಮುರಿದುಹೋಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಿಸೈಡಿಂಗ್ ಆಫೀಸರ್ ನೀಡಿದ ದೂರಿನ ಆಧಾರದ ಮೇಲೆ ಶಾಸಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ನ್ಯಾಯಾಲಯ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಪ್ರಸ್ತುತ ಅವರನ್ನು ಖುರ್ದಾ ಜೈಲಿನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆಯ ಜೊತೆಗೆ ಜಗದೇವ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಶಾಸಕರು ಬೂತ್‌ನಲ್ಲಿ ಗಲಾಟೆ ಸೃಷ್ಟಿಸಿ, ಮತದಾನಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಮತಗಟ್ಟೆ ಸಿಬ್ಬಂದಿಯನ್ನು ನಿಂದಿಸಿದ್ದಾರೆ ಎಂದು ಅಧಿಕಾರಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (ಡಿಇಒ) ಅವರಿಗೆ ಮನವಿ ಮಾಡಿದ್ದೇವೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.